9 Matching Annotations
- Nov 2018
-
www.vachana.sanchaya.net www.vachana.sanchaya.net
-
ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆಅಯ್ಯಾ, ನಿನ್ನ ಸಂಗದಿಂದ ಕಾಕುತನವ ಬಿಟ್ಟುಬೇಕಾದ ಹಾಂಗೆಯಾದೆ.ಅಯ್ಯಾ, ನಿನ್ನ ಒಲವು ಅನೇಕ ಪ್ರಕಾರದಲ್ಲಿಪಸರಿ ಪರ್ಬಿತ್ತು ಎನ್ನ ಸರ್ವಾಂಗದಲ್ಲಿ.ನಿನ್ನವರೊಲುಮೆಯ ಆನಂದವನು ಎನಗೆ ಕರುಣಿಸುಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ.
-
ಅಸಂಖ್ಯಾತ ಆದಿಬ್ರಹ್ಮರುತ್ಪತ್ಯವಾಗದಂದು,ಅಸಂಖ್ಯಾತ ಆದಿನಾರಾಯಣರುತ್ಪತ್ಯವಾಗದಂದು,ಅಸಂಖ್ಯಾತ ಸುರೇಂದ್ರಾದಿಗಳು ಉತ್ಪತ್ಯವಾಗದಂದು,ಅಸಂಖ್ಯಾತ ಮನುಮುನಿ ದೈತ್ಯರು ಉತ್ಪತ್ಯ ಲಯವಾಗದಂದು,ಓಂಕಾರವೆಂಬ ಆದಿಪ್ರಣವವಾಗಿದ್ದನು ನೋಡಾನಮ್ಮ ಅಪ್ರಮಾಣಕೂಡಲಸಂಗಮದೇವ.
-
ಅಂಗದ ಮೇಲೊಂದು ಲಿಂಗವು, ಲಿಂಗದ ಮೇಲೊಂದು ಅಂಗವು.ಆವುದು ಘನವೆಂಬೆ ? ಆವುದು ಕಿರಿದೆಂಬೆ ?ತಾಳೋಷ್ಠಸಂಪುಟಕ್ಕೆ ಬಾರದ ಘನ, ಉಭಯಲಿಂಗವಿರಹಿತವಾದ ಶರಣ.ಕೂಡಲಚೆನ್ನಸಂಗಾ ಲಿಂಗೈಕ್ಯವು.
-
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ.ಮುಂದೆ ಬರೆಬರೆ ಮಹಾಸರೋವರವ ಕಂಡೆ.ಸರೋವರದೊಳಗೊಂದು ಹಿರಿಯ ಮೃಗವ ಕಂಡೆ.ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ,ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ,ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ.ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ.ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ,ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು.ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ,ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ.ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ,ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ.ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು.ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
-
ಅಂಥ ಬ್ರಹ್ಮಾಂಡವ ಎಪ್ಪತ್ತೈದುಲಕ್ಷದ ಮೇಲೆಸಾವಿರದೇಳುನೂರಾ ನಲವತ್ತೆಂಟುಬ್ರಹ್ಮಾಂಡವನೊಳಕೊಂಡುದೊಂದು ಭದ್ರವೆಂಬ ಭುವನ.ಆ ಭುವನದೊಳು ಭದ್ರಕರ್ಣನೆಂಬ ಮಹಾರುದ್ರಮೂರ್ತಿ ಇಹನು.ಆ ರುದ್ರಮೂರ್ತಿಯ ಓಲಗದಲ್ಲಿಎಂಟುನೂರಾ ಎಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರುಮುನೀಂದ್ರರು ದೇವರ್ಕಳಿಹರು ನೋಡಾ.ಎಂಟುನೂರಾ ಎಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣಇಂದ್ರಾದಿ ದೇವರ್ಕಳಿಹರು ನೋಡಾಅಪ್ರಮಾಣಕೂಡಲಸಂಗಮದೇವಾ.
-
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ.ಮುಂದೆ ಬರೆಬರೆ ಮಹಾಸರೋವರವ ಕಂಡೆ.ಸರೋವರದೊಳಗೊಂದು ಹಿರಿಯ ಮೃಗವ ಕಂಡೆ.ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ,ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ,ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ.ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ.ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ,ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು.ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ,ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ.ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ,ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ.ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು.ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
-
-
-
www.vachana.sanchaya.net www.vachana.sanchaya.net
-
ಆಕಾರ ನಿರಾಕಾರವೆಂಬೆರಡೂ ಸ್ವರೂಪಂಗಳು ;ಒಂದು ಆಹ್ವಾನ, ಒಂದು ವಿಸರ್ಜನ,ಒಂದು ವ್ಯಾಕುಳ, ಒಂದು ನಿರಾಕುಳ.ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.
-
-
www.vachana.sanchaya.net www.vachana.sanchaya.net
-
ರಾಕಾರವೆಂಬೆರಡೂ ಸ್ವರೂಪಂಗಳು ;ಒಂದು ಆಹ್ವಾನ, ಒಂದು ವಿಸರ್ಜನ,ಒಂದು ವ್ಯಾಕುಳ, ಒಂದು ನಿರಾಕುಳ.ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.
Tags
Annotators
URL
-