2 Matching Annotations
  1. Feb 2019
    1. ಅನಾದಿಯಾಗಿ ಪಶು ಪಾಶ ಮಲ ಮಯಾಕರ್ಮಗಳುಂಟಾದರೆ,ಈ ಜಗವನೊಬ್ಬರೂ ಸೃಷ್ಟಿಮಾಡಿದ ಕರ್ತುವಲ್ಲ.ಎಂದೆಂದೂ ಜಗವಿದ್ದಿತ್ತು ನಿತ್ಯವೆನ್ನು.ಎಂದೆಂದೂ ಜಗವಿದ್ದಿತ್ತೆಂಬೆಯಾದರೆ,ಶಿವನ ಸೃಷ್ಟಿ, ಸ್ಥಿತಿ, ಸಂಹಾರ, ಸ್ಥಿರೋಭಾವ, ಅನುಗ್ರಹವೆಂಬಪಂಚಕೃತ್ಯಗಳು ಹುಸಿಯೆಂದೆನ್ನು.ಶಿವನಿಗೆ ಸೃಷ್ಟಿ ಸ್ಥಿತಿ ಸಂಹಾರಾರ್ಥವುಂಟಾದರೆ,ಈ ಜಗತ್ತೆಲ್ಲವೂ ಶಿವನ ನೆನಹು ಮಾತ್ರದಿಂದ ಹುಟ್ಟಿತ್ತಲ್ಲದೆ,ಎಂದೆಂದೂ ಉಂಟೆಂಬುದು ಶೈವ ಪಶುಮತವಲ್ಲದೆ,ವೀರಶೈವರ ಮತವಲ್ಲ.ವೀರಶೈವರ ಮತವೆಂತೆಂದಡೆ:ಘನ ಗಂಬ್ಥೀರ ವಾರಿದ್ಥಿಯೊಳಗೆ ಫೇನತರಂಗಬುದ್ಬುದ ಶೀಕರಾದಿಗಳು ತೋರಿದಡೆ,ಆ ಸಾಗರ ಹೊರಗಾಗಿ ತೋರಬಲ್ಲವೇ?ಆ ಪರಶಿವಸಾಗರದಲ್ಲಿ ತೃಣಾದಿ ಬ್ರಹ್ಮಾಂತವಾದ ದೇಹಿಗಳುಉತ್ಪತ್ತಿಯಾಗಿ ಮತ್ತಲ್ಲಿಯೇ ಅಡಗುತ್ತಿಪ್ಪರು ನೋಡಾ.ಇದು ಕಾರಣ, ಲಿಂಗನಿರ್ಮಿತದಿಂದ ಜಗತ್ತಾಯಿತೆಂದೆ ಕಾಣಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
  2. Nov 2018