4 Matching Annotations
  1. Nov 2018
    1. ಅಷ್ಟದಳಕಮಲವ ಮೆಟ್ಟಿ ಚರಿಸುವಹಂಸನ ಭೇದವ ಹೇಳಿಹೆನು:ಪೂರ್ವದಳಕೇರಲು ಗುಣಿಯಾಗಿಹನು.ಅಗ್ನಿದಳಕೇರಲು ಕ್ಷುಧೆಯಾಗಿಹನು.ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು.ನೈಋತ್ಯದಳಕೇರಲು ಅಸತ್ಯನಾಗಿಹನು.ವರುಣದಳಕೇರಲು ನಿದ್ರೆಗೆಯ್ವುತಿಹನು.ವಾಯುದಳಕೇರಲು ಸಂಚಲನಾಗಿಹನು.ಉತ್ತರದಳಕೇರಲು ಧರ್ಮಿಯಾಗಿಹನು.ಈಶಾನ್ಯದಳಕೇರಲು ಕಾಮಾತುರನಾಗಿಹನು.ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ:ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆಅಷ್ಟ ಲಿಂಗಕಳೆಯ ಪ್ರತಿಷ್ಠಿಸಿಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲುಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
    2. ಅಯ್ಯಾ, ಕಾಲತೊಳೆದುಕೊಂಡು ಬಂದರೆ ಕಣ್ಣಮುಂದೆ ನಿಂದೆ.ಕೈಯ ತೊಳೆದುಕೊಂಡು ಬಂದರೆ ಮನದ ಮುಂದೆ ನಿಂದೆ.ತಲೆಯ ತೊಳೆದುಕೊಂಡು ಬಂದರೆ ಭಾವದ ಮುಂದೆ ನಿಂದೆ.ಸಂದು ಸಂಶಯ ಕುಂದು ಕಲೆಯ ಕಳೆದುಳಿದು ಬಂದರೆಸರ್ವಾಂಗಸನ್ನಿಹಿತನಾಗಿ ನಿಂದೆ.ಬಂದ ಬರವು ಚಂದವಾಗಿ ನಿಂದರೆ ಅಂದಂದಿಗೆ ಅವಧರಿಸುಮುಂದುವರಿವೆನು ಮುದದಿಂದೆ ಗುರುನಿರಂಜನ ಚನ್ನಬಸವಲಿಂಗಾ.
    3. ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ,ತಿಂಗಳ ಸೂಡನಾದೆ ನೋಡಾ ಅಯ್ಯಾ.ಮಂಗಳಮೂರ್ತಿ ಗಂಗಾಜೂಟಾಂಗಮಯಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ,ನಿಜದ ನಿರ್ವಯಲಲ್ಲಯ್ಯನೆ.
    4. ಅಗ್ಘವಣಿ ಸುಯಿದಾನವಾದ ಶರಣಂಗೆ,ತನು ಸುಯಿದಾನವಾಗಬೇಕು.ತನು ಸುಯಿದಾನವಾದ ಶರಣಂಗೆಮನ ಸುಯಿದಾನವಾಗಬೇಕು.ಮನ ಸುಯಿದಾನವಾದ ಶರಣಂಗೆಪ್ರಾಣದ ಮೇಲೆ ಲಿಂಗ ಸಯವಾಗಬೇಕು.ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ