24 Matching Annotations
- Feb 2019
-
www.vachana.sanchaya.net www.vachana.sanchaya.net
-
ಅನಾದಿಯಾಗಿ ಪಶು ಪಾಶ ಮಲ ಮಯಾಕರ್ಮಗಳುಂಟಾದರೆ,ಈ ಜಗವನೊಬ್ಬರೂ ಸೃಷ್ಟಿಮಾಡಿದ ಕರ್ತುವಲ್ಲ.ಎಂದೆಂದೂ ಜಗವಿದ್ದಿತ್ತು ನಿತ್ಯವೆನ್ನು.ಎಂದೆಂದೂ ಜಗವಿದ್ದಿತ್ತೆಂಬೆಯಾದರೆ,ಶಿವನ ಸೃಷ್ಟಿ, ಸ್ಥಿತಿ, ಸಂಹಾರ, ಸ್ಥಿರೋಭಾವ, ಅನುಗ್ರಹವೆಂಬಪಂಚಕೃತ್ಯಗಳು ಹುಸಿಯೆಂದೆನ್ನು.ಶಿವನಿಗೆ ಸೃಷ್ಟಿ ಸ್ಥಿತಿ ಸಂಹಾರಾರ್ಥವುಂಟಾದರೆ,ಈ ಜಗತ್ತೆಲ್ಲವೂ ಶಿವನ ನೆನಹು ಮಾತ್ರದಿಂದ ಹುಟ್ಟಿತ್ತಲ್ಲದೆ,ಎಂದೆಂದೂ ಉಂಟೆಂಬುದು ಶೈವ ಪಶುಮತವಲ್ಲದೆ,ವೀರಶೈವರ ಮತವಲ್ಲ.ವೀರಶೈವರ ಮತವೆಂತೆಂದಡೆ:ಘನ ಗಂಬ್ಥೀರ ವಾರಿದ್ಥಿಯೊಳಗೆ ಫೇನತರಂಗಬುದ್ಬುದ ಶೀಕರಾದಿಗಳು ತೋರಿದಡೆ,ಆ ಸಾಗರ ಹೊರಗಾಗಿ ತೋರಬಲ್ಲವೇ?ಆ ಪರಶಿವಸಾಗರದಲ್ಲಿ ತೃಣಾದಿ ಬ್ರಹ್ಮಾಂತವಾದ ದೇಹಿಗಳುಉತ್ಪತ್ತಿಯಾಗಿ ಮತ್ತಲ್ಲಿಯೇ ಅಡಗುತ್ತಿಪ್ಪರು ನೋಡಾ.ಇದು ಕಾರಣ, ಲಿಂಗನಿರ್ಮಿತದಿಂದ ಜಗತ್ತಾಯಿತೆಂದೆ ಕಾಣಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
Tags
Annotators
URL
-
-
vachana.sanchaya.net vachana.sanchaya.net
-
ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ,ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ.ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ.ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ.ಅದೆಂತೆಂದಡೆ, ಶಿವಧರ್ಮೇ-``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ |ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ |ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||''ಎಂದುದಾಗಿ,ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾಅಖಂಡೇಶ್ವರಾ.
Tags
Annotators
URL
-
- Nov 2018
-
www.vachana.sanchaya.net www.vachana.sanchaya.net
-
ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆಅಯ್ಯಾ, ನಿನ್ನ ಸಂಗದಿಂದ ಕಾಕುತನವ ಬಿಟ್ಟುಬೇಕಾದ ಹಾಂಗೆಯಾದೆ.ಅಯ್ಯಾ, ನಿನ್ನ ಒಲವು ಅನೇಕ ಪ್ರಕಾರದಲ್ಲಿಪಸರಿ ಪರ್ಬಿತ್ತು ಎನ್ನ ಸರ್ವಾಂಗದಲ್ಲಿ.ನಿನ್ನವರೊಲುಮೆಯ ಆನಂದವನು ಎನಗೆ ಕರುಣಿಸುಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ.
-
-
ಅನಾದಿಯಾಗಿ ಪಶು ಪಾಶ ಮಲ ಮಯಾಕರ್ಮಗಳುಂಟಾದರೆ,ಈ ಜಗವನೊಬ್ಬರೂ ಸೃಷ್ಟಿಮಾಡಿದ ಕರ್ತುವಲ್ಲ.ಎಂದೆಂದೂ ಜಗವಿದ್ದಿತ್ತು ನಿತ್ಯವೆನ್ನು.ಎಂದೆಂದೂ ಜಗವಿದ್ದಿತ್ತೆಂಬೆಯಾದರೆ,ಶಿವನ ಸೃಷ್ಟಿ, ಸ್ಥಿತಿ, ಸಂಹಾರ, ಸ್ಥಿರೋಭಾವ, ಅನುಗ್ರಹವೆಂಬಪಂಚಕೃತ್ಯಗಳು ಹುಸಿಯೆಂದೆನ್ನು.ಶಿವನಿಗೆ ಸೃಷ್ಟಿ ಸ್ಥಿತಿ ಸಂಹಾರಾರ್ಥವುಂಟಾದರೆ,ಈ ಜಗತ್ತೆಲ್ಲವೂ ಶಿವನ ನೆನಹು ಮಾತ್ರದಿಂದ ಹುಟ್ಟಿತ್ತಲ್ಲದೆ,ಎಂದೆಂದೂ ಉಂಟೆಂಬುದು ಶೈವ ಪಶುಮತವಲ್ಲದೆ,ವೀರಶೈವರ ಮತವಲ್ಲ.ವೀರಶೈವರ ಮತವೆಂತೆಂದಡೆ:ಘನ ಗಂಬ್ಥೀರ ವಾರಿದ್ಥಿಯೊಳಗೆ ಫೇನತರಂಗಬುದ್ಬುದ ಶೀಕರಾದಿಗಳು ತೋರಿದಡೆ,ಆ ಸಾಗರ ಹೊರಗಾಗಿ ತೋರಬಲ್ಲವೇ?ಆ ಪರಶಿವಸಾಗರದಲ್ಲಿ ತೃಣಾದಿ ಬ್ರಹ್ಮಾಂತವಾದ ದೇಹಿಗಳುಉತ್ಪತ್ತಿಯಾಗಿ ಮತ್ತಲ್ಲಿಯೇ ಅಡಗುತ್ತಿಪ್ಪರು ನೋಡಾ.ಇದು ಕಾರಣ, ಲಿಂಗನಿರ್ಮಿತದಿಂದ ಜಗತ್ತಾಯಿತೆಂದೆ ಕಾಣಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
-
ಅಷ್ಟದಳಕಮಲವ ಮೆಟ್ಟಿ ಚರಿಸುವಹಂಸನ ಭೇದವ ಹೇಳಿಹೆನು:ಪೂರ್ವದಳಕೇರಲು ಗುಣಿಯಾಗಿಹನು.ಅಗ್ನಿದಳಕೇರಲು ಕ್ಷುಧೆಯಾಗಿಹನು.ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು.ನೈಋತ್ಯದಳಕೇರಲು ಅಸತ್ಯನಾಗಿಹನು.ವರುಣದಳಕೇರಲು ನಿದ್ರೆಗೆಯ್ವುತಿಹನು.ವಾಯುದಳಕೇರಲು ಸಂಚಲನಾಗಿಹನು.ಉತ್ತರದಳಕೇರಲು ಧರ್ಮಿಯಾಗಿಹನು.ಈಶಾನ್ಯದಳಕೇರಲು ಕಾಮಾತುರನಾಗಿಹನು.ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ:ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆಅಷ್ಟ ಲಿಂಗಕಳೆಯ ಪ್ರತಿಷ್ಠಿಸಿಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲುಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
-
ಅಯ್ಯಾ, ಕಾಲತೊಳೆದುಕೊಂಡು ಬಂದರೆ ಕಣ್ಣಮುಂದೆ ನಿಂದೆ.ಕೈಯ ತೊಳೆದುಕೊಂಡು ಬಂದರೆ ಮನದ ಮುಂದೆ ನಿಂದೆ.ತಲೆಯ ತೊಳೆದುಕೊಂಡು ಬಂದರೆ ಭಾವದ ಮುಂದೆ ನಿಂದೆ.ಸಂದು ಸಂಶಯ ಕುಂದು ಕಲೆಯ ಕಳೆದುಳಿದು ಬಂದರೆಸರ್ವಾಂಗಸನ್ನಿಹಿತನಾಗಿ ನಿಂದೆ.ಬಂದ ಬರವು ಚಂದವಾಗಿ ನಿಂದರೆ ಅಂದಂದಿಗೆ ಅವಧರಿಸುಮುಂದುವರಿವೆನು ಮುದದಿಂದೆ ಗುರುನಿರಂಜನ ಚನ್ನಬಸವಲಿಂಗಾ.
-
ಅಸಂಖ್ಯಾತ ಆದಿಬ್ರಹ್ಮರುತ್ಪತ್ಯವಾಗದಂದು,ಅಸಂಖ್ಯಾತ ಆದಿನಾರಾಯಣರುತ್ಪತ್ಯವಾಗದಂದು,ಅಸಂಖ್ಯಾತ ಸುರೇಂದ್ರಾದಿಗಳು ಉತ್ಪತ್ಯವಾಗದಂದು,ಅಸಂಖ್ಯಾತ ಮನುಮುನಿ ದೈತ್ಯರು ಉತ್ಪತ್ಯ ಲಯವಾಗದಂದು,ಓಂಕಾರವೆಂಬ ಆದಿಪ್ರಣವವಾಗಿದ್ದನು ನೋಡಾನಮ್ಮ ಅಪ್ರಮಾಣಕೂಡಲಸಂಗಮದೇವ.
-
ಅಂಗದ ಮೇಲೊಂದು ಲಿಂಗವು, ಲಿಂಗದ ಮೇಲೊಂದು ಅಂಗವು.ಆವುದು ಘನವೆಂಬೆ ? ಆವುದು ಕಿರಿದೆಂಬೆ ?ತಾಳೋಷ್ಠಸಂಪುಟಕ್ಕೆ ಬಾರದ ಘನ, ಉಭಯಲಿಂಗವಿರಹಿತವಾದ ಶರಣ.ಕೂಡಲಚೆನ್ನಸಂಗಾ ಲಿಂಗೈಕ್ಯವು.
-
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ.ಮುಂದೆ ಬರೆಬರೆ ಮಹಾಸರೋವರವ ಕಂಡೆ.ಸರೋವರದೊಳಗೊಂದು ಹಿರಿಯ ಮೃಗವ ಕಂಡೆ.ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ,ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ,ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ.ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ.ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ,ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು.ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ,ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ.ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ,ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ.ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು.ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
-
ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ.ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ.ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.
-
ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ,ತಿಂಗಳ ಸೂಡನಾದೆ ನೋಡಾ ಅಯ್ಯಾ.ಮಂಗಳಮೂರ್ತಿ ಗಂಗಾಜೂಟಾಂಗಮಯಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ,ನಿಜದ ನಿರ್ವಯಲಲ್ಲಯ್ಯನೆ.
-
ಅನ್ಯದೈವ ಭವಿನಾಸ್ತಿಯಾದಲ್ಲಿ, ಪಾದತೀರ್ಥಪ್ರಸಾದವಿಲ್ಲದೆ ಬಾಯಿದೆರೆದಲ್ಲಿ, ಲಿಂಗಕ್ಕೆ ಕೊಡದೆ ಕೊಂಡಲ್ಲಿ, ಆ ವ್ರತಕ್ಕೆ ಆಚಾರವೆ ಪ್ರಾಣವಾಗಿರ್ಪ ರಾಮೇಶ್ವರಲಿಂಗ ದೂರಸ್ಥನಾಗಿಪ್ಪನು
-
ಅಂಥ ಬ್ರಹ್ಮಾಂಡವ ಎಪ್ಪತ್ತೈದುಲಕ್ಷದ ಮೇಲೆಸಾವಿರದೇಳುನೂರಾ ನಲವತ್ತೆಂಟುಬ್ರಹ್ಮಾಂಡವನೊಳಕೊಂಡುದೊಂದು ಭದ್ರವೆಂಬ ಭುವನ.ಆ ಭುವನದೊಳು ಭದ್ರಕರ್ಣನೆಂಬ ಮಹಾರುದ್ರಮೂರ್ತಿ ಇಹನು.ಆ ರುದ್ರಮೂರ್ತಿಯ ಓಲಗದಲ್ಲಿಎಂಟುನೂರಾ ಎಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರುಮುನೀಂದ್ರರು ದೇವರ್ಕಳಿಹರು ನೋಡಾ.ಎಂಟುನೂರಾ ಎಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣಇಂದ್ರಾದಿ ದೇವರ್ಕಳಿಹರು ನೋಡಾಅಪ್ರಮಾಣಕೂಡಲಸಂಗಮದೇವಾ.
-
ಅಂಗನೆಯ ಚಿತ್ತ,ರಮಣನ ಸುತ್ತಿಮುತ್ತಿ ಅಪ್ಪಿ ಅಗಲದಿಪ್ಪಂತೆಜಾಗ್ರ, ಸ್ವಪ್ನ, ಸುಷುಪ್ತಿಯಲ್ಲಿಶರಣ ಚಿತ್ತರತಿ ಶಿವಲಿಂಗವ ಸುತ್ತಿ ಮುತ್ತಿಅಪ್ಪಿ ಅಗಲದಿಪ್ಪರೆಆ ಮಹಾತ್ಮನ ಏನೆಂದುಪಮಿಸುವೆನಯ್ಯ?ಲಿಂಗಪ್ರಾಣಿಯ, ಪ್ರಾಣಲಿಂಗಸಂಬಂದ್ಥಿಯ?ಸ್ವತಂತ್ರ ವಸ್ತುವಿನಲ್ಲಿ ಅರಿವರತು ಬೆರಗು ನಿಬ್ಬೆರಗಾದ,ಘನಲಿಂಗಪ್ರಾಣಿಗೆ ನಮೋ ನಮೋಯೆಂಬೆನಯ್ಯಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
-
ಅಸಿ ಮಸಿ ಕೃಷಿ ವಾಣಿಜ್ಯ ಮುಂತಾದ ಕಾಯಕವ ಮಾಡಿ, ಭಕ್ತರ ಪಡುಗ, ಪಾದತ್ರಾಣ, ಪಹರಿ, ಬಾಗಿಲು, ಬೊಕ್ಕಸ, ಬಿಯಗ ಮುಂತಾದ ಕಾಯಕವಂ ಮಾಡಿಕೊಂಡು ವ್ರತಕ್ಕೆ ಊಣೆಯವಿಲ್ಲದೆ ಮಾಡುವ ಕೃತ್ಯಕ್ಕೆ ಕಡೆಯಾಗದೆ ಈ ಭಕ್ತನ ಅಂಗಳ ಅವಿಮುಕ್ತಿಕ್ಷೇತ್ರ, ಆತನ ಮನೆಯೆ ಆಚಾರವೆ ಪ್ರಾಣವಾದ
-
ಅಡವಿಯಲೊಬ್ಬ ಕಡು ನೀರಡಿಸಿ,ಎಡೆಯಲ್ಲಿ ನೀರ ಕಂಡಂತಾುತ್ತಯ್ಯಾ.ಕುರುಡ ಕಣ್ಣ ಪಡೆದಂತೆ,ಬಡವ ನಿಧಾನವ ಹಡೆದಂತಾುತ್ತಯ್ಯಾ.ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ. 376
-
ಅಗ್ಘವಣಿ ಸುಯಿದಾನವಾದ ಶರಣಂಗೆ,ತನು ಸುಯಿದಾನವಾಗಬೇಕು.ತನು ಸುಯಿದಾನವಾದ ಶರಣಂಗೆಮನ ಸುಯಿದಾನವಾಗಬೇಕು.ಮನ ಸುಯಿದಾನವಾದ ಶರಣಂಗೆಪ್ರಾಣದ ಮೇಲೆ ಲಿಂಗ ಸಯವಾಗಬೇಕು.ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ
-
ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ.ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ.ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.
-
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ.ಮುಂದೆ ಬರೆಬರೆ ಮಹಾಸರೋವರವ ಕಂಡೆ.ಸರೋವರದೊಳಗೊಂದು ಹಿರಿಯ ಮೃಗವ ಕಂಡೆ.ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ,ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ,ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ.ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ.ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ,ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು.ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ,ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ.ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ,ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ.ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು.ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
-
-
-
-
www.vachana.sanchaya.net www.vachana.sanchaya.net
-
ಆಕಾರ ನಿರಾಕಾರವೆಂಬೆರಡೂ ಸ್ವರೂಪಂಗಳು ;ಒಂದು ಆಹ್ವಾನ, ಒಂದು ವಿಸರ್ಜನ,ಒಂದು ವ್ಯಾಕುಳ, ಒಂದು ನಿರಾಕುಳ.ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.
-
-
www.vachana.sanchaya.net www.vachana.sanchaya.net
-
ರಾಕಾರವೆಂಬೆರಡೂ ಸ್ವರೂಪಂಗಳು ;ಒಂದು ಆಹ್ವಾನ, ಒಂದು ವಿಸರ್ಜನ,ಒಂದು ವ್ಯಾಕುಳ, ಒಂದು ನಿರಾಕುಳ.ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.
Tags
Annotators
URL
-